ನವದೆಹಲಿ :
IPL 2022: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಟೀಂ ಇಂಡಿಯಾ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಫಾರ್ಮ್‌ಗೆ ಮರಳಿದ್ದಾರೆ. ಗುರುವಾರ ಗುಜರಾತ್ ಟೈಟಾನ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಬ್ಯಾಟಿಂಗ್‌ನಲ್ಲಿ ಮತ್ತದೇ ಖದರ್ ಕಾಣಿಸಿಕೊಂಡಿದೆ.
ಕೊಹ್ಲಿಯ ಬ್ಯಾಟಿಂಗ್‌ನಲ್ಲಿ ಹರಿಯಿತು ಹಳೇ ಮಿಂಚು :
ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ 54 ಎಸೆತಗಳಲ್ಲಿ 73 ರನ್ ಬಾರಿಸಿದ್ದಾರೆ. ವಿರಾಟ್ ಕೊಹ್ಲಿ ಅವರ ಈ ಅತ್ಯುತ್ತಮ ಇನ್ನಿಂಗ್ಸ್‌ನಲ್ಲಿ 8 ಬೌಂಡರಿ ಮತ್ತು 2 ಸಿಕ್ಸರ್‌ಗಳು ಸೇರಿದ್ದವು. ಇದರೊಂದಿಗೆ ವಿರಾಟ್ ಕೊಹ್ಲಿ ಫ್ರಾಂಚೈಸಿ ಕ್ರಿಕೆಟ್‌ನಲ್ಲಿ ‘ಶ್ರೇಷ್ಠ ದಾಖಲೆ’ ನಿರ್ಮಿಸಿದ್ದಾರೆ.
ಫ್ರಾಂಚೈಸಿ ಕ್ರಿಕೆಟ್‌ನಲ್ಲಿ ‘ಮಹಾ ದಾಖಲೆ’ :
ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್‌ನಲ್ಲಿ ಫ್ರಾಂಚೈಸಿಗಾಗಿ 7000 ರನ್ ಗಳಿಸಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್ ಆಗಿದ್ದಾರೆ. ವಿಶ್ವದ ಯಾವುದೇ ಬ್ಯಾಟ್ಸ್‌ಮನ್‌ಗಳು ಫ್ರಾಂಚೈಸಿ ಕ್ರಿಕೆಟ್‌ನಲ್ಲಿ ಇಂತಹ ಸಾಧನೆ ಮಾಡಿಲ್ಲ. ಗುಜರಾತ್ ಟೈಟಾನ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ 73 ರನ್‌ಗಳನ್ನು ಬಾರಿಸುವ ಮೂಲಕ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್‌ನಲ್ಲಿ ಫ್ರಾಂಚೈಸಿಗಾಗಿ 7000 ರನ್ ಪೂರೈಸಿದ ಮೊದಲ ದಾಂಡಿಗ ಎನಿಸಿಕೊಂಡಿದ್ದಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕೊಹ್ಲಿ ಒಟ್ಟು 7016 ರನ್ ಕಲೆಹಾಕಿದ್ದಾರೆ.
ವಿಶ್ವದಾದ್ಯಂತ ಬ್ಯಾಟ್ಸ್‌ಮನ್‌ಗಳು ಈ ‘ಮಹಾ ದಾಖಲೆ’ ಮಾಡಲು ಹಾತೊರೆಯುತ್ತಿದ್ದಾರೆ. ವಿರಾಟ್ ಕೊಹ್ಲಿ ಐಪಿಎಲ್ ಮತ್ತು ಚಾಂಪಿಯನ್ಸ್ ಲೀಗ್ ಟಿ20ಯಲ್ಲಿ ರನ್ ಗಳಿಸುವ ಮೂಲಕ ಆರ್‌ಸಿಬಿಯನ್ನು ದೊಡ್ಡ ಸ್ಥಾನಕ್ಕೆ ಏರಿಸಿದ್ದಾರೆ. ವಿರಾಟ್ ಕೊಹ್ಲಿ ಐಪಿಎಲ್‌ನಲ್ಲಿ 6,592 ರನ್ ಗಳಿಸಿದ ದಾಖಲೆ ಹೊಂದಿದ್ದಾರೆ. ಇದಲ್ಲದೇ ಚಾಂಪಿಯನ್ಸ್ ಲೀಗ್ ಟಿ20 ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ವಿರಾಟ್ ಕೊಹ್ಲಿ 424 ರನ್ ಗಳಿಸಿದ್ದಾರೆ……